ಉತ್ತರಪ್ರದೇಶದಲ್ಲಿ ಆರಂಭವಾಯಿತು``ರೆಡ್ ರಮ್``
Posted date: 11 Fri, Nov 2022 07:01:54 PM
ಕೌಟಿಲ್ಯ ಸಿನಿಮಾಸ್ ಹಾಗೂ ಹನಿ ಚೌಧರಿ ಫಿಲಂಸ್ ಲಾಂಛನದಲ್ಲಿ   ಅಶೋಕ್ ದೇವನಾಂಪ್ರಿಯ, ಕಿಶೋರ್ ಎ. ವಿಜಯ್ ಕುಮಾರ್ ಹಾಗೂ ಹನಿ ಚೌಧರಿ ನಿರ್ಮಾಣದ
"ರೆಡ್ ರಮ್" ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ, ಮೋದಿನಗರದ ಶ್ರೀ ಸನಾತನ ಧರ್ಮ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮೋದಿ ನಗರದ ಶಾಸಕರಾದ ಶ್ರೀಮತಿ ಮಂಜು ಶಿವಾಚ್, ಸ್ಥಳೀಯ ಕೌನ್ಸಿಲರ್ ರಾಜಕುಮಾರಿ ಮುನ್ನಿ ಜಿ ಹಾಗೂ ಅನೇಕ ಗಣ್ಯರು ಆಗಮಿಸಿ ಶುಭಹಾರೈಸಿದರು. 

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ರೆಡ್ ರಮ್" ಚಿತ್ರವನ್ನು  ಆರ್. ಪ್ರಮೋದ್ ಜೋಯಿಸ್ ನಿರ್ದೇಶಿಸುತ್ತಿದ್ದಾರೆ.   ಶಿವಶಂಕರ್ (ಶಂಖು) ಛಾಯಾಗ್ರಹಣ ಹಾಗೂ ಆರ್. ಚೇತನ್ ಕೃಷ್ಣ ಸಂಗೀತ ನಿರ್ದೇಶನವಿರುವ ಈ ಚಿತ್ರದ   ಕಾರ್ಯಕಾರಿ ನಿರ್ಮಾಪಕರು ಅಫ್ಜಲ್. 
 
ಬಾಲಿವುಡ್ ನಟ  ರಾಜ್ ವೀರ್, ಮಧುರಾ, ಅಫ್ಜಲ್ , ಶ್ರೀದತ್ತಾ, ಪ್ರಾಚಿ ಶರ್ಮ, ಧ್ರಿತೇಶ್ ವಿನಯ್ ಸೂರ್ಯ ಹಾಗೂ ಯತಿರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 
 ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ಕಲಾವಿದರ ಸಮಾಗಮ  ಚಿತ್ರದಲ್ಲಿದೆ. 

ಹಿಂದೆಂದೂ ಕೇಳಿರದಂತಹ ಕಥೆಯ ಅನಾವರಣ ಈ ಚಿತ್ರದಲ್ಲಿದೆ ಎಂದು ನಿರ್ದೇಶಕರು ಹೇಳಿದ್ದಾರೆ. ಈ ಚಿತ್ರದ ಮುಖಾಂತರ ಕೊಡಗಿನ ಬೆಡಗಿ ಮಧುರಾ ಹಾಗೂ ಪ್ರಾಚಿ ಶರ್ಮ (ಮುಂಬೈ) ಇಬ್ಬರು ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ. 

ಸುಮಾರು 20 ದಿನಗಳ ಕಾಲ ಉತ್ತರಪ್ರದೇಶದ ಸುತ್ತಾ ಮುತ್ತಾ ಚಿತ್ರೀಕರಣ ನಡೆಯಲಿದೆ.  ಉಳಿದ ಭಾಗವನ್ನು ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡುವ ಯೋಜನೆಯಿದೆ ಎಂದು ಚಿತ್ರತಂಡದ ಪರವಾಗಿ ಅಫ್ಜಲ್ ಮಾಹಿತಿ ನೀಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed