ಕರುಳುಬಳ್ಳಿಯ ಕಥೆ ಹೇಳಲಿದೆ ``2nd ಲೈಫ್``
Posted date: 17 Thu, Nov 2022 09:42:51 PM
ಮಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ.  ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು "2 nd ಲೈಫ್" ಚಿತ್ರ ತಯಾರಾಗಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದೆ.
 
ಜೀವನದಲ್ಲಿ ಯಾವುದೋ ದೊಡ್ಡ ಅನಾಹುತ ನಡೆದು ಅದರಿಂದ ಪಾರಾದಾಗ ಎಲ್ಲರೂ ಹೇಳುವುದು. ನಿನ್ನ ಹೊಸಜೀವನ ಆರಂಭವಾಗಿದೆ ಅಂತ.  ಈ ರೀತಿಯ ಘಟನೆ ಚಿತ್ರದಲ್ಲಿ ನಡೆಯುವುದರಿಂದ ಚಿತ್ರಕ್ಕೆ "2nd ಲೈಫ್" ಅಂತ ಹೆಸರಿಡಲಾಗಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ  ಬರಲಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ಚಿತ್ರದ ಕುರಿತು ವಿವರಣೆ ನೀಡಿದರು.

ನಾನು ಈ ಹಿಂದೆ "ಸ್ವಾರ್ಥ ರತ್ನ" ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ "2 nd ಲೈಫ್" ಚಿತ್ರದಲ್ಲಿ ನಟಿಸಿದ್ದೇನೆ. ನಾನು ಮೂಲತಃ ಆಡಿಟರ್. ಮಂಜುಳಾ ರಮೇಶ್ ಅವರು ಬರೆದಿರುವ ಈ ಚಿತ್ರದ ಕಥೆ ಹಿಡಿಸಿತು. ಪಿ.ಆರ್.ಕೆ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹಿಸಿ ಎಂದರು ನಾಯಕ ಆದರ್ಶ ಗುಂಡುರಾಜ್.  

ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ  ನಾಯಕಿ ಸಿಂಧೂ ರಾವ್ ತಿಳಿಸಿದರು.

ಸಂಗೀತ ನಿರ್ದೇಶಕ ಆರವ್ ರಿಶಿಕ್, ಛಾಯಾಗ್ರಹಕ ರಮೇಶ್ ಕೊಯಿರ,  ನಟ ಶಿವಪ್ರದೀಪ್ ಹಾಗೂ ಸಹ ನಿರ್ಮಾಪಕ - ನಟ ರುದ್ರಮುನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed