ಕೆ.ವಿ.ಶಶಿಧರ್ನಿ ರ್ಮಿಸಿದ ಕೆ.ಎಂ.ರಘು ನಿರ್ದೇಶನದ``ಜಸ್ಟ್ ಪಾಸ್``ಚಿತ್ರ ನಾಳೆಯಿಂದ
Posted date: 08 Thu, Feb 2024 04:00:25 PM
ರಾಯ್ಸ್ ಎಂಟರ್  ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ "ಜಸ್ಟ್ ಪಾಸ್" ಚಿತ್ರ ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಚಿತ್ರದ  ಟೀಸರ್, ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 9 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.    

 ಸಾಮಾನ್ಯವಾಗಿ ಹೆಚ್ಚು ಅಂಕಗಳನ್ನು ತೆಗೆದುಕೊಂಡವರಿಗೆ ಸಾಕಷ್ಟು ಕಾಲೇಜುಗಳಿರುತ್ತದೆ.  ವಿಶೇಷವೆಂದರೆ ಈ ಚಿತ್ರದಲ್ಲಿ "ಜಸ್ಟ್ ಪಾಸ್" ಆದವರಿಗೆ ಅಂತಲೇ ಒಂದು ಕಾಲೇಜು ಇದೆ. ಆ ಕಾಲೇಜಿನ ವಿದ್ಯಾರ್ಥಿಗಳ ತರಲೆ, ತಮಾಷೆಗಳನ್ನು ನಿರ್ದೇಶಕ ರಘು ಈ ಚಿತ್ರದಲ್ಲಿ ತೋರಿಸಿದ್ದಾರೆ. ವಿದ್ಯಾರ್ಥಿಗಳಿಗಂತೂ ಅಪ್ಪಟ್ಟ ಮನೋರಂಜನೆಯ ರಸದೌತಣ ಸಿಗುವುದಂತು ಖಚಿತ. ಬರೀ ಇಷ್ಟೇ ಅಲ್ಲ. ಉತ್ತಮ ಸಂದೇಶ ಸಹ ಈ ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕರು.

ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸುಜಯ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಅರ್ಜುನ್ ಅವರ ಸಾಹಸ ನಿರ್ದೇಶನವಿರುವ "ಜಸ್ಟ್ ಪಾಸ್" ಚಿತ್ರಕ್ಕೆ ಕೆ.ಎಂ.ರಘು ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಶ್ರೀ, ಪ್ರಣತಿ, ರಂಗಾಯಣರಘು ಸಾಧುಕೋಕಿಲ ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed