ಧನಂಜಯ್ 26ನೇ ಸಿನಿಮಾ ಅನೌನ್ಸ್....ಕನ್ನಡದ ಜೊತೆಗೆ ತೆಲುಗಿನಲ್ಲಿಯೂ ಬರಲಿದೆ ಚಿತ್ರ
Posted date: 21 Wed, Sep 2022 11:19:52 AM
ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ.
 
ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. ಹೀಗಾಗಿ ಧನಂಜಯ್ ಗೆ ಬೇಡಿಕೆ ಹೆಚ್ಚಿದ್ದು, ಇದೀಗ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ನಟರಾಕ್ಷಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು..
 
ಈ ಹಿಂದೆ ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಡಾಲಿ-ಸತ್ಯದೇವ್ ಬಣ್ಣ ಹಚ್ಚಿರುವ 26ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಕ್ರೈಮ್  ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್‌ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ  ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ. 
 
ಟಗರು ಸಿನಿಮಾ ಖ್ಯಾತಿಯ ಚರಣ್ ರಾಜ್ ಸಂಗೀತ, ಮಣಿಕಂಠನ್ ಕೃಷ್ಣಮಾಚಾರಿ ಛಾಯಾಗ್ರಹಣ, ಅನಿಲ್ ಕ್ರಿಶ್ ಸಂಕಲನ ಸಿನಿಮಾಕ್ಕಿದ್ದು, ಶೀಘ್ರದಲ್ಲೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed