ನೋ ಸ್ಮೋಕಿಂಗ್ ಆಡ್ ಖ್ಯಾತಿಯ ಬಾಲನಟಿ ಈಗ `ಬರ್ಕ್ಲಿ` ಚಿತ್ರದ ನಾಯಕಿ
Posted date: 03 Sat, Apr 2021 10:57:34 AM
ಕೆಲವು ವರ್ಷಗಳ ಹಿಂದೆ ಚಿತ್ರ ಆರಂಭಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ಧೂಮಪಾನ ನಿಷೇಧದ (ನೋ ಸ್ಮೋಕಿಂಗ್ ಆಡ್) ಕುರಿತಾಗಿ ಬರುತ್ತಿದ್ದ ಜಾಹೀರಾತಿನಲ್ಲಿ ಅಭಿನಯಿಸುತ್ತಿದ್ದ ಬಾಲನಟಿ ಸಿಮ್ರಾನ್
ನಾಟೇಕರ್.
ಕೇಂದ್ರ ಸರ್ಕಾರದಿಂದ ಪ್ರಕಟವಾಗುತ್ತಿದ್ದ‌ ಈ ಜಾಹಿರಾತಿನಲ್ಲಿ ಅಭಿನಯಿಸಿ, ಚಿಕ್ಕ ವಯಸ್ಸಿನಲ್ಲಿ ಎಲ್ಲರಿಗೂ ಚಿರಪರಿತರಾಗಿದ್ದರು ಸಿಮ್ರಾನ್ ನಾಟೇಕರ್.
ಮೂಲತಃ ಮುಂಬೈನವರಾದ ಸಿಮ್ರಾನ್ ಸಾಕಷ್ಟು ಜಾಹಿರಾತುಗಳಲ್ಲಿ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಬರ್ಕ್ಲಿ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಸಿನಿರಂಗ ಪ್ರವೇಶಿಸಿದ್ದಾರೆ. 
 ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಚಿತ್ರದ ಮೊದಲಪ್ರತಿ ಸಿದ್ದವಾಗಲಿದೆ. 
ಈ ಹಿಂದೆ ಕರಿಯ, ಗಣಪ, ಕರಿಯ ೨    ಅದ್ದೂರಿ ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ  ಬರ್ಕ್ಲಿ.
ವಸಿಷ್ಠ ಸಿಂಹ ಅಭಿನಯದ ಕಾಲಚಕ್ರ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿರುವ ಸುಮಂತ್ ಕ್ರಾಂತಿ ಈ ಚಿತ್ರದ ನಿರ್ದೇಶಕರು. 
ಸಾಹಸ ಪ್ರಧಾನ ಹಾಗೂ ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿ
 ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. 

ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.
 
 ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ‌ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ.  ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ, ಅಮಿತ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed