ಆರ್ ಚಂದ್ರು ನಿರ್ದೇಶನದ ಬಹು ನಿರೀಕ್ಷಿತ ``ಕಬ್ಜ`` ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್ ಆರಂಭ
Posted date: 07 Tue, Jun 2022 06:35:14 PM
ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ "ಕಬ್ಜ" ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ.

ಒಂದು ಹಾಡಿನ ಚಿತ್ರೀಕರಣ ಬಿಟ್ಟು, ಉಳಿದ ಚಿತ್ರೀಕರಣ  ಮುಕ್ತಾಯವಾಗಿದೆ.  ಏಕಕಾಲದಲ್ಲಿ ಏಳುಭಾಷೆಗಳಲ್ಲೂ ಡಬ್ಬಿಂಗ್ ಸಹ ಸದ್ದಿಲ್ಲದೆ ನಡೆಯುತ್ತಿದೆ. 

1940ರ ಕಾಲಘಟ್ಟದ ಕಥೆ ಅದ್ಭುತವಾಗಿದೆ. ಮೋಷನ್ ಪೋಸ್ಟರ್ ಹಾಗೂ ಸ್ಟಿಲ್ಸ್ ಜನಮನಸೂರೆಗೊಂಡಿದೆ. ಮೇಕಿಂಗ್ ತುಣುಕು ನೋಡಿದವರಂತು ಫಿದಾ ಆಗಿದ್ದಾರೆ. ಭಾರತ ದೇಶವೇ ತಿರುಗಿ ನೋಡುವ ಸಿನಿಮಾ ಇದಾಗಲಿದೆ. "ಕಬ್ಜ" ಚಿತ್ರ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲಾಗಲಿ ಎಂಬುದೇ ಕನ್ನಡಿಗರ ಆಶಯ. ಚಿತ್ರದ. ಟೀಸರ್ ನೋಡುವ ಕಾತುರದಲ್ಲಿದ್ದೇವೆ. ಆದಷ್ಟು ಬೇಗ ಬಿಡುಗಡೆ ಮಾಡಿ ಎಂದು ಸಿನಿಪ್ರೇಕ್ಷಕರು ಚಂದ್ರು ಅವರನ್ನು ಒತ್ತಾಯಿಸುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed