ಬಡವ ರಾಸ್ಕಲ್ ಡಿಸೆಂಬರ್ 24 ರಂದು ತೆರೆಯ ಮೇಲೆ
Posted date: 29 Mon, Nov 2021 06:11:41 PM
ಕನ್ನಡದ ಬಹು ಬೇಡಿಕೆಯ ನಟ ಡಾಲಿ ಧನಂಜಯ ಅವರ ಚೊಚ್ಚಲ ನಿರ್ಮಾಣದ ಚಿತ್ರ ಬಡವ ರಾಸ್ಕಲ್ ಡಿಸೆಂಬರ್ 24 ರಂದು ತೆರೆಯ ಮೇಲೆ ಬರಲಿದೆ. 
ಬಹಳ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಸಿಕರ ಮನಸೂರೆಗೊಳಿಸುತ್ತಿರುವ ಧನಂಜನ ಅವರು ಈ ಚಿತ್ರದಲ್ಲಿಯೂ ವಿಷೇಶ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 
ಇತ್ತೀಚಿಗೆ ಬಡವ ರಾಸ್ಕಲ್ ಚಿತ್ರಕ್ಕೆ ಹೊಸ ರೀತಿಯಲ್ಲಿ ಅಭಿಮಾನಿಗಳು ಪ್ರೋತ್ಸಾಹ ನೀಡಿ ಸ್ವಯಂಪ್ರೇರಿತರಾಗಿ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. 
ಶಾಲಾ ಮಕ್ಕಳಿಂದ ಹಿಡಿದು ದಿನಸಿ ಅಂಗಡಿ, ತರಕಾರಿ ಅಂಗಡಿ, ಮಾಂಸದ ಅಂಗಡಿ, ಕಾರು ಗ್ಯಾರೇಜ್, ಆಟೋ ಚಾಲಕರವರೆಗೂ ಬಹಳ ವರ್ಗಗಳಲ್ಲಿ ದುಡಿಯುವ ಕನ್ನಡಾಭಿಮಾನಿಗಳು ಚಿತ್ರವನ್ನು ನೋಡಲು ಕಾತುರರಾಗಿದ್ದಾರೆ. 
ದಾಸರ ಕವಿವಾಣಿ ``ಕೆರೆಯ ನೀರನು ಕೆರೆಗೆ ಚೆಲ್ಲಿ`` ಅನ್ನುವಂತೆ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡು ಬೆಳೆದ ಧನಂಜಯ ಅವರು ಕನ್ನಡ ಚಿತ್ರಗಳನ್ನು ನಿರ್ಮಿಸಿ ಬೆಳೆಸುವ ಪಣ ತೊಟ್ಟಿದ್ದಾರೆ.
ಕನ್ನಡ ಕೂಲಕೋಟಿ ತಮ್ಮ ಬೆಂಬಲ ಕೊಟ್ಟು ಧನಂಜಯ ಅವರನ್ನು, ಕನ್ನಡ ಚಿತ್ರರಂಗವನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕಾಗಿ ಮನವಿ.
`ಡಾಲಿ ಪಿಕ್ಚರ್`(Dolly Picture) ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್‌ ಅಭಿನಯಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್‌, ಪೂರ್ಣಚಂದ್ರ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್‌ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಕರ್ನಾಟಕದಾದ್ಯಂತ ``KRG ಸ್ಟೂಡಿಯೋಸ್`` ಸಂಸ್ಥೆ ಬಿಡುಗಡೆ ಮಾಡಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed