ನಳೆ ಶುಕ್ರವಾರ ``ಚಾಂಪಿಯನ್`` ರಾಜ್ಯಾದ್ಯಂತ ತೆರೆ ಕಾಣುತ್ತಿದೆ
Posted date: 13 Thu, Oct 2022 08:17:12 AM
ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ನಳೆ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ.  ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ, ಆದಿ ಲೋಕೇಶ್, ರಂಗಾಯಣ ರಘು, ಅವಿನಾಶ್, ಕಾಕ್ರೋಜ್ ಸುಧಿ, ಶೋಭರಾಜ್, ಅಶೋಕ್ ಶರ್ಮ, ಪ್ರಶಾಂತ್ ಸಿದ್ದಿ, ಗಿರಿ, ಮಂಡ್ಯ ರಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌. ಖ್ಯಾತ ನಟಿ ಸನ್ನಿಲಿಯೋನ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. 

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸರವಣನ್ ನಟರಾಜನ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ "ಚಾಂಪಿಯನ್" ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. 

"ಚಾಂಪಿಯನ್" ಚಿತ್ರದ ಬಗ್ಗೆ 
ನಿರ್ದೇಶಕ ಶಾಹುರಾಜ್ ಶಿಂಧೆ ಬಹಳ ಆಸೆ ಇಟ್ಟುಕೊಂಡಿದ್ದರು. ಆದರೆ ಚಿತ್ರ ಬಿಡುಗಡೆಗೂ ಮುಂಚೆಯೇ ಶಾಹುರಾಜ್ ಶಿಂಧೆ ವಿಧಿವಶರಾಗಿರುವುದು ನಿಜಕ್ಕೂ ದುಃಖದ ಸಂಗತಿ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed