ಡಾಲಿ ಧನಂಜಯ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರಕ್ಕೆ `ಜೀಬ್ರಾ` ಟೈಟಲ್ ಫಿಕ್ಸ್
Posted date: 27 Fri, Jan 2023 11:09:07 PM
ಡಾಲಿ ಧನಂಜಯ್ ಮತ್ತು ತೆಲುಗಿನ ಸತ್ಯದೇವ್ ಜೊತೆಯಾಗಿ ನಟಿಸುತ್ತಿರುವ, ಪ್ಯಾನ್ ಇಂಡಿಯಾ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಚಿತ್ರಕ್ಕೆ `ಜೀಬ್ರಾ` ಎಂಬ ಹೆಸರನ್ನು ಇಡಲಾಗಿದೆ. 
 
ಓಲ್ಡ್ಟೌನ್ ಪಿಕ್ಚರ್ಸ್ ಎಲ್ಎಲ್ಪಿ ಮತ್ತು ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಮಲ್ಟಿಸ್ಟಾರರ್ ಚಿತ್ರವನ್ನು `ಪೆಂಗ್ವಿನ್` ಖ್ಯಾತಿಯ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ 50 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಬಾಕಿ ಉಳಿದಿರುವ ಚಿತ್ರೀಕರಣವನ್ನು ಹೈದರಾಬಾದ್, ಕೊಲ್ಕತ್ತಾ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
 
`ಜೀಬ್ರಾ` ಚಿತ್ರತಂಡಕ್ಕೆ ಇದೀಗ `ಕೆಜಿಎಫ್ 1 ಮತ್ತು 2` ಮುಂತಾದ ಚಿತ್ರಗಳ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಆಗಮನವಾಗಿದೆ. ಇತ್ತೀಚೆಗಷ್ಟೇ ಅಜಯ್ ದೇವಗನ್ ನಿರ್ದೇಶನದ `ಭೋಲಾ` ಚಿತ್ರಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿರುವ ರವಿ ಬಸ್ರೂರು, ಇದೀಗ ಜೀಬ್ರಾ ಚಿತ್ರಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ.
 
ಚಿತ್ತಂಡಕ್ಕೆ ರವಿ ಬಸ್ರೂರು ಸೇರ್ಪಡೆಯಾಗಿರುವ ವಿಷಯ ಕುರಿತು ಮಾತನಾಡಿರುವ ನಿರ್ಮಾಪಕರಾದ ಬಾಲಸುಂದರಂ ಮತ್ತು ಪದ್ಮಜಾ ರೆಡ್ಡಿ, `ರವಿ ಬಸ್ರೂರು ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವು ಈ ಚಿತ್ರದ ಹೈಲೈಟ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಅವರು ಚಿತ್ರದ ಆತ್ಮವನ್ನು ತಮ್ಮ ಸಂಗೀತದ ಮೂಲಕ ಅದ್ಭುತವಾಗಿ ಎತ್ತಿಹಿಡಿಯಲಿದ್ದಾರೆ` ಎಂದು ಹೇಳಿದ್ದಾರೆ.
`ಜೀಬ್ರಾ` ಚಿತ್ರದಲ್ಲಿ ಧನಂಜಯ ಮತ್ತು ಸತ್ಯದೇವ್ ಜೊತೆಗೆ `ಕಟ್ಟಪ್ಪ` ಖ್ಯಾತಿಯ ಸತ್ಯರಾಜ್, ಸುನೀಲ್ ಮುಂತಾದವರು ನಟಿಸುತ್ತಿದ್ದಾರೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣ ಮತ್ತು ಅನಿಲ್ ಕ್ರಿಶ್ ಅವರ ಸಂಕಲನ ಈ ಚಿತ್ರಕ್ಕಿದೆ.


ತಾಂತ್ರಿಕ ತಂಡ
ನಿರ್ದೇಶನ: ಈಶ್ವರ್ ಕಾರ್ತಿಕ್
ನಿರ್ಮಾಣ: ಎಸ್.ಎನ್. ರೆಡ್ಡಿ (ಪದ್ಮಜಾ ಫಿಲಂಸ್ ಪ್ರೈವೇಟ್ ಲಿ), ಬಾಲಸುಂದರಂ ಮತ್ತು ದಿನೇಶ್ ಸುಂದರಂ (ಓಲ್ಡ್ಟೌನ್ ಪಿಕ್ಚರ್ಸ್)
ಛಾಯಾಗ್ರಹಣ: ಸತ್ಯ ಪೊನ್ಮಾರ್
ಸಂಗೀತ: ರವಿ ಬಸ್ರೂರು
ಸಂಕಲನ: ಅನಿಲ್ ಕ್ರಿಶ್
ಸಂಭಾಷಣೆ: ಮೀರಾಕ್
ಸಾಹಸ ನಿರ್ದೇಶನ: ರಾಬಿನ್ ಸುಬ್ಬು ಮಾಸ್ಟರ್
ವಾಸ್ತ್ರ ವಿನ್ಯಾಸ: ಅಶ್ವಿನಿ
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed