ನಾಯಕನ ಹುಟ್ಟುಹಬ್ಬಕ್ಕೆ `ಶಂಭೋ ಶಿವ ಶಂಕರ` ಚಿತ್ರದ ಟೀಸರ್
Posted date: 02 Mon, Aug 2021 02:50:15 PM
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು  ನಿರ್ಮಿಸುತ್ತಿರುವ `ಶಂಭೋ ಶಿವ ಶಂಕರ` ಚಿತ್ರದ ನಾಯಕರಲೊಬ್ಬರಾದ ಅಭಯ್ ಪುನೀತ್ ಅವರ ಹುಟ್ಟುಹಬ್ಬ ಇತ್ತೀಚೆಗೆ ನೆರವೇರಿದೆ. 
ಅಭಯ್ ಪುನೀತ್ ಹುಟ್ಟುಹಬ್ಬದ ಸವಿನೆನಪಿಗಾಗಿ ಚಿತ್ರತಂಡ ಆನಂದ್ ಆಡಿಯೋ ಮೂಲಕ ಟೀಸರ್ ಬಿಡುಗಡೆಮಾಡಿದೆ.  
ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸ್ಯಾಂಡಲ್ ವುಡ್ ಗಣ್ಯರು ಈ ಟೀಸರ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡುತ್ತಿದ್ದಾರೆ.

ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಕೊನೆಯ ಹಂತದ ಚಿತ್ರೀಕರಣ ಆಗಸ್ಟ್ 3 ರಿಂದ ಆರಂಭವಾಗಲಿದೆ.

 ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು  ನಿರ್ದೇಶಿಸುತ್ತಿದ್ದಾರೆ.
ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.
ಗೌಸ್ ಫೀರ್  ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ‌. 
ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ. 
`ಶಂಭೋ ಶಿವ ಶಂಕರ` ಮೂರು ನಾಯಕ  ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್,  ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್`, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed