ನವರಸನ್ ನಿರ್ಮಾಣದ ಚಂದನ್ ಶೆಟ್ಟಿ ಅಭಿನಯದ ನೂತನ ಚಿತ್ರ ವಿಜಯ ದಶಮಿಗೆ
Posted date: 18 Sun, Sep 2022 09:37:29 PM
ಖ್ಯಾತ ಗಾಯಕ, ಸಂಗೀತ ನಿರ್ದೇಶಕ  ಚಂದನ್ ಶೆಟ್ಟಿ, ಈಗ ನಟನಾಗೂ ಪ್ರಸಿದ್ಧಿ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ.‌ 

ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾ ದ ಪ್ರಮುಖ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ "ದಮಯಂತಿ" ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ‌. 

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ.ನಾಯಕಿಯ ಆಯ್ಕೆ ನಡೆಯುತ್ತಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed