ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
Posted date: 26 Wed, Oct 2022 06:41:45 PM
ಹ್ಯಾಟ್ರಿಕ್ ಹೀರೋ, ಅಭಿಮಾನಿಗಳ ಪ್ರೀತಿಯ ಶಿವಣ್ಣ ಸ್ಯಾಂಡಲ್ ವುಡ್ ಬ್ಯುಸಿಯೆಸ್ಟ್ ನಟ. ಸದ್ಯ ಶಿವಣ್ಣ 125ನೇ ಸಿನಿಮಾ `ವೇದ` ಡಿಸೆಂಬರ್ ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ಘೋಸ್ಟ್, ನೀ ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕರೊಬ್ಬರು ಹೇಳಿರೋ ಕಥೆ ಕೇಳಿ ಇಂಪ್ರೆಸ್ ಆಗಿರೋ ಶಿವಣ್ಣ ಅವರೊಂದಿಗೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

ಅಂದ್ಹಾಗೆ ಶಿವರಾಜ್ ಕುಮಾರ್ ಗೆ ಆಕ್ಷನ್ ಕಟ್ ಹೇಳ್ತಿರೋ ನಿರ್ದೇಶಕ ತೆಲುಗಿನ ಕಾರ್ತಿಕ್ ಅದ್ವೈತ್. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ `ಪಾಯುಮ್ ಒಲಿ ನೀ ಎನಕ್ಕು` ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿರೋ ಇವರಿಗೆ ನಿರ್ದೇಶಕನಾಗಿ ಇದು ಎರಡನೇ ಸಿನಿಮಾ.

ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ ನಲ್ಲಿ, ಡಿಫ್ರೆಂಟ್ ರೋಲ್ ನಲ್ಲಿ ಕಾಣಸಿಗಲಿದ್ದಾರೆ. ಸಿನಿಮಾ ಕಥೆ ಕೇಳಿ ಶಿವಣ್ಣ ಕೂಡ ಎಕ್ಸೈಟ್ ಆಗಿದ್ದಾರೆ. ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ. ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಬಹಳ ದೊಡ್ಡ ಮೊಟ್ಟದಲ್ಲಿ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.  ಚಿತ್ರದ ಟೈಟಲ್, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಇದೆಲ್ಲದರ ಬಗ್ಗೆ ಮುಂಬರುವ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳೊದಾಗಿ ನಿರ್ದೇಶಕ ಕಾರ್ತಿಕ್ ಅದ್ವೈತ್  ತಿಳಿಸಿದ್ದಾರೆ.

ಶಿವಣ್ಣ ಅಭಿನಯದ‌ `ಕಿಲ್ಲಿಂಗ್ ವೀರಪ್ಪನ್` ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ `ಆಫೀಸರ್`, `ಗುಡ್ ಲಕ್ ಸಖಿ` ಸಿನಿಮಾ ನಿರ್ಮಿಸಿರುವ  ನಿರ್ಮಾಪಕ ಸುಧೀರ್ ಚಂದ್ರ ಪಡಿರಿ  `ಸುಧೀರ್ ಚಂದ್ರ ಫಿಲಂ ಕಂಪನಿ` ಬ್ಯಾನರ್ ನಡಿ  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed