ಕನ್ನೇರಿ ಚಿತ್ರದ ``ಬೆಟ್ಟದ ಕಣಿವೆಗಳ`` ಎಂಬ ಸಾಂಗ್ ರಿಲೀಸ್ ಮಾಡಿದ ಖ್ಯಾತ ನಟಿ ಶ್ರುತಿ
Posted date: 23 Sat, Oct 2021 01:31:18 PM
ನೀನಾಸಂ ಮಂಜು ನಿರ್ದೇಶನದ ಕನ್ನೇರಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಚಿತ್ರ ಕನ್ನೇರಿ. ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದ ಹಾಡನ್ನು ಚಂದನವನದ ದಂತದ ಗೊಂಬೆ ಶ್ರುತಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಬೆಟ್ಟದ ಕಣಿವೆಗಳ ಎಂಬ ಜನಪದ ಹಾಡಿಗೆ ಮಾರ್ಚನ್ ಟಚ್ ಕೊಟ್ಟು ಹಾಡನ್ನು ತಯಾರಿಸಲಾಗಿದೆ. ಅದ್ಭುತ ಮ್ಯೂಸಿಕ್, ಕ್ಯಾಚಿ‌ ಲಿರಿಕ್ಸ್ ನ ಬೆಟ್ಟದ ಕಣಿವೆಗಳ ಹಾಡು ಯೂಟ್ಯೂಬ್ ನಲ್ಲಿ ಸದ್ದು ಮಾಡ್ತಿದೆ.

ಚಿತ್ರದಲ್ಲಿ ಅರ್ಚನಾ ಮಧುಸೂಧನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು,
ಅನಿತಾ ಭಟ್, ಎಂ.ಕೆ.ಮಠ್, ಅರುಣ್ ಸಾಗರ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ಪ್ರತಿಭಾನ್ವಿತ ಕಲಾವಿದರ ತಂಡ ಚಿತ್ರದಲ್ಲಿದೆ. ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಸಾಂಗ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದೆ.


ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಪಿ.ಪಿ ಹೆಬ್ಬಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಹಣ , ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಕನ್ನೇರಿ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed