ಏಳುಕೋಟಿ ಮೈಲಾರನ ಗಾನಲಹರಿ ಬಿಡುಗಡೆ
Posted date: 18 Sat, Jun 2022 08:56:13 AM
ಏಳುಕೋಟಿ ಮೈಲಾರನ ಗಾನಲಹರಿ ಬಿಡುಗಡೆ.. ಭಕ್ತಿ ಭಾವದಿಂದ ಕುಣಿದಿದ್ದರು ಸಂಚಾರಿ ವಿಜಯ್..ನೀವು ಒಮ್ಮೆ ಕಣ್ತುಂಬಿಕೊಳ್ಳಿ ಮೈಲಾರ ಲಿಂಗೇಶ್ವರನ ಜಾತ್ರೆ

ಕನ್ನಡ ಚಿತ್ರರಂಗದಲ್ಲಿ ಭಕ್ತಿಗೀತೆಗಳು, ಜನಪದ ಗೀತೆಗಳು ಸಾಕಷ್ಟು ಬಂದಿದೆ. ಆದ್ರೆ ಹೊಸತನ ಹಾಗೂ ವಿಶೇಷಗಳಿಂದ ಕೂಡಿರುವ ಮೈಲಾರ ಲಿಂಗೇಶ್ವರ ಸ್ವಾಮಿಯ ಭಕ್ತಿ ಪೂರ್ಣ ಗೀತೆ ಮೈಲಾರ ಆಲ್ಬಂ ಹಾಡು ಹೊರಹೊಮ್ಮಿದ್ದು, ನೋಡಿದವರೆಲ್ಲೂ ನಿಂತಲ್ಲೇ ಉಘೇ ಉಘೇ ಮೈಲಾರ ಸ್ವಾಮಿ ಎನ್ನುತ್ತಿದ್ದಾರೆ.

ಜನಪದ ಹಿನ್ನಲೆ ಹಾಡುಗಳನ್ನು  ಮಾಡಬೇಕೆಂಬ ಆತೀವ ಆಸಕ್ತಿ, ಶ್ರದ್ಧೆಯಿಂದ ಗಾಯಕ, ಸಂಗೀತ ನಿರ್ದೇಶಕ ಪ್ರದೀಪ್ ಚಂದ್ರ ಮೈಲಾರ ಆಲ್ಬಂ ಹಾಡು ತಯಾರಿಸಿದ್ದಾರೆ. ಮೈಸೂರು ಭಾಗದಲ್ಲಿ ಮಲೆ ಮಹದೇಶ್ವರ ಸ್ವಾಮಿ ಎಷ್ಟು ಪ್ರಸಿದ್ಧಿಯೂ ಅದೇ ರೀತಿ ಹಾವೇರಿ ಭಾಗದಲ್ಲಿ ಮೈಲಾರ ಲಿಂಗೇಶ್ವರ ಖ್ಯಾತಿ ಪಡೆದಿದೆ. ಹೀಗಾಗಿ ಮೈಲಾರ ಸ್ವಾಮಿಯ ಜಾತ್ರೆ ಸೊಬಗನ್ನು, ಅಲ್ಲಿ ಸಂಪ್ರದಾಯ, ಭವಿಷ್ಯ ನುಡಿಯುವ ಕಾರ್ಣಿಕ, ಅಲ್ಲಿನ ಪವಾಡಗಳನ್ನು ಮುಖ್ಯವಸ್ತುವನ್ನಾಗಿರಿಸಿಕೊಂಡು ಚೆಂದದ ಆಲ್ಬಂ ಸಾಂಗ್ ರೂಪಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed