ಶಿವಣ್ಣನ ಮುಂದಿನ ಚಿತ್ರಕ್ಕೆ `ಅವನೇ ಶ್ರೀಮನ್ನಾರಾಯಣ` ನಿರ್ದೇಶಕ ನಿರ್ದೇಶನ-ನಿರ್ಮಾಣ
Posted date: 21 Sat, May 2022 � 04:30:11 PM
ಅವನೇ ಶ್ರೀಮನ್ನಾರಾಯಣ ಸಿನಿಮಾ ನಿರ್ದೇಶಕ ಸಚಿನ್ ರವಿ ಮುಂದಿನ ಸಿನಿಮಾ ಹೇಗಿರಲಿದೆ? ಯಾವ ಸ್ಟಾರ್ ಆಕ್ಷನ್ ಕಟ್ ಹೇಳ್ತಾರೆ? ಯಾವ ಜಾನರಿನ ಸಿನಿಮಾ ಮಾಡಲಿದ್ದಾರೆ? ಅನ್ನೋ ಪ್ರಶ್ನೆ ಚಿತ್ರರಸಿಕರ ಮನದಲ್ಲಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಚಿನ್ ಮುಂದಿನ ಸಿನಿಮಾವನ್ನು ಶಿವಣ್ಣನಿಗೆ ನಿರ್ದೇಶನ ಮಾಡಲಿದ್ದಾರೆ.

ಅಶ್ವತ್ಥಾಮನಾಗಲಿದ್ದಾರೆ ಶಿವಣ್ಣ

ಸಚಿನ್ ರವಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾದಲ್ಲಿ ಶಿವಣ್ಣ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶನದ ಜೊತೆಗೆ ನಿರ್ಮಾಣಕ್ಕಿಳಿದ ಸಚಿನ್

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪೆನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲಿಯೇ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ನೀಡಲಿದೆ.

ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಸದ್ಯ ಸಿನಿಮಾ ಬಗ್ಗೆ ಇಷ್ಟು ಗುಟ್ಟುಬಿಟ್ಟು ಕೊಟ್ಟಿರುವ ಸಚಿನ್, ಮುಂದಿನ ದಿನಗಳಲ್ಲಿ ಉಳಿದ ಕಲಾವಿದರು ಹಾಗೂ ತಂತ್ರಜ್ಞಾನ ತಂಡವನ್ನು ಪರಿಚಯಿಸಲಿದ್ದು, ಬರುವ ಸೆಪ್ಟಂಬರ್ ನಿಂದ ಶೂಟಿಂಗ್ ಶುರುವಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed