ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು``ಮಾಫಿಯಾ``ಚಿತ್ರದ ಹೊಸ ಪೋಸ್ಟರ್
Posted date: 17 Fri, Feb 2023 12:08:22 PM
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ  ನಾಯಕ - ನಾಯಕಿಯಾಗಿ ನಟಿಸಿರುವ "ಮಾಫಿಯಾ" ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ. 
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ "ಮಾಫಿಯಾ" ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed