ಡಿಸೆಂಬರ್ 17ರಂದು ಓಟಿಟಿಯಲ್ಲಿ ``ಕನ್ನಡಿಗ`` ನ ಆಗಮನ
Posted date: 14 Tue, Dec 2021 08:54:25 AM
ಡಾ||ರವಿಚಂದ್ರ. ವಿ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಬಿ.ಎಂ.ಗಿರಿರಾಜ್ ನಿರ್ದೇಶನ   ಕ್ರೇಜಿಸ್ಟಾರ್ ಡಾ||ರವಿಚಂದ್ರ.ವಿ ನಾಯಕರಾಗಿ ನಟಿಸಿರುವ "ಕನ್ನಡಿಗ" ಚಿತ್ರ ಡಿಸೆಂಬರ್ 17ರಂದು ಜೀ ಸಿನಿಮಾ ಕನ್ನಡ  ಓಟಿಟಿಯಲ್ಲಿ  ಬಿಡುಗಡೆಯಾಗಲಿದೆ.

ಪೀರಿಯಡ್ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರವನ್ನು ``ಜಟ್ಟ``,  ``ಮೈತ್ರಿ`` ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶಿಸಿದ್ದಾರೆ. ರಚನೆ ಕೂಡ ಗಿರಿರಾಜ್ ಅವರದೆ. ಓಂಕಾರ್ ಮೂವೀಸ್ ಲಾಂಛನದಲ್ಲಿ ಎನ್.ಎಸ್.ರಾಜಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. 

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಜಿ.ಎಸ್.ವಿ.ಸೀತಾರಾಂ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಹೊಸ್ಮನೆ ಮೂರ್ತಿ ಕಲಾ‌ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ ‌ಸಾಹಸ ನಿರ್ದೇಶನ‌ ಈ ಚಿತ್ರಕ್ಕಿದೆ‌.
ಡಾ||ರವಿಚಂದ್ರ.ವಿ, ಪಾವನ, ಜೀವಿಕ, ಜಮ್ಮಿ ಅಲ್ಟರ್, ಬಾಲಾಜಿ ‌ಮನೋಹರ್,‌ ರಾಕ್ ಲೈನ್ ವೆಂಕಟೇಶ್, ಶೃಂಗ, ಮೈತ್ರಿ ಜಗ್ಗ ಮುಂತಾದವರು "ಕನ್ನಡಿಗ" ಚಿತ್ರದಲ್ಲಿ ಅಭಿನಯಿಸಿದ್ದಾರೆ.

 

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed