ಶಿವರಾಜಕುಮಾರ್ ಅಭಿನಯದ 124 ನೇ ಚಿತ್ರ ನೀ ಸಿಗೋವರೆಗೂ
Posted date: 16 Sat, Oct 2021 11:46:33 AM
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ``ನೀ ಸಿಗೋವರೆಗೂ`` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. 
 ಬೆಂಗಳೂರು, ಚಿಕ್ಕಮಗಳೂರು, ಜಮ್ಮು&ಕಾಶ್ಮೀರ ಹಾಗೂ ಯು ಎಸ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. 

 ಶಿವರಾಜಕುಮಾರ್ ಈ ಚಿತ್ರದಲ್ಲಿ ಆರ್ಮಿ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹೊಸ  ಲುಕ್ ದಸರಾದ ಶುಭ ಸಂದರ್ಭದಲ್ಲಿ ಅನಾವರಣಗೊಂಡಿದೆ. ಇದು ಶಿವರಾಜಕುಮಾರ್ ಅಭಿನಯದ ೧೨೪ ನೇ ಚಿತ್ರವೂ ಹೌದು.
ಭಾವನಾತ್ಮಕ ಪ್ರೇಮಕಥಾಹಂದರದ ಈ ಚಿತ್ರವನ್ನು ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. 
 .
 ಮೆರ್ಹಿನ್ ಫಿರ್ಜಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್, ಮಂಗ್ಲಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 
" ಟಗರು " ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ  ನರಾಲ ಶ್ರೀನಿವಾಸ್ ರೆಡ್ಡಿ  ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

 ಕುಡಿಪುಡಿ ವಿಜಯ್ ಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

 ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ "ನೀ ಸಿಗೋವರೆಗೂ" ಚಿತ್ರ ನಿರ್ಮಾಣವಾಗಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed