ಪುನೀತ್,ಪ್ರಭುದೇವ, ಕೃಷ್ಣ ಸಂಗಮದಲ್ಲಿ ಲಕ್ಕಿಮ್ಯಾನ್
Posted date: 26 Fri, Nov 2021 06:49:30 AM
ಮೊಟ್ಟ ಮೊದಲ ಬಾರರಿಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್  ಅವರು  ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರವೊಂದು ಸದ್ದಿಲ್ಲದೆ ತೆರೆಗೆ ಬರುವ ಸಿದ್ದತೆ ನಡೆಸಿದೆ. ಪರ್ಸಾ ಪಿಕ್ಚರ್ಸ್ ಲಾಂಛನದಲ್ಲಿ   ನಿರ್ಮಾಣವಾಗುತ್ತಿರುವ  ಈ ಚಿತ್ರದ ಹೆಸರು ಲಕ್ಕಿ ಮ್ಯಾನ್. ಇದರ  ಚಿತ್ರೀಕರಣವೂ ಈಗಾಗಲೇ ಸಂಪೂರ್ಣಗೊಂಡಿದ್ದು ಸದ್ಯ ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ಮಾತಿನ ಜೋಡಣೆ (ಡಬ್ಬಿಂಗ್) ಕಾರ್ಯ ನಡೆಯುತ್ತಿದೆ. ಈ ಚಿತ್ರದಲ್ಲಿ ಡಾರ್ಲಿಂಗ್ ಕ್ಥಷ್ಣ  ನಾಯಕರಾಗಿದ್ದರೂ, ಪುನೀತ್ ರಾಜಕುಮಾರ್‌  ಅವರ ಪಾತ್ರಕ್ಕೆ  ಹೆಚ್ಚಿನ ಪ್ರಾಮುಖ್ಯತೆಯಿದೆ. ವಿಷೇಶವಾಗಿ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಬಹುಭಾಷಾ ನಟ ಪ್ರಭುದೇವಾ ಇಬ್ಬರೂ ಡಾ.ರಾಜ್ ಕುಮಾರ್ ಅವರ ಮೇಲೆ ರಚಿಸಲಾದ ಹಾಡೊಂದರಲ್ಲಿ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಇದೇ ಮೊದಲಬಾರಿಗೆ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. 
  ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ನಾಯಕಿಯಾಗಿ ಸಂಗೀತ ಶೃಂಗೇರಿ ಅವರು ಕಾಣಿಸಿಕೊಂಡಿದ್ದು, ರೋಶನಿ ಪ್ರಕಾಶ್ ದ್ವಿತೀಯ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ಆರ್ಯ, ರಂಗಾಯಣ ರಘು, ಸಾಧುಕೋಕಿಲ  ನಾಗಭೂಷಣ್, ಸುಂದರ್ ರಾಜ್, ರೋಶಿನಿ ಪ್ರಕಾಶ್, ಸುದಾ ಬೆಳವಾಡಿ, ಮಾಳವಿಕ. ಮುಂತಾದ ಕಲಾವಿದರು ನಟಿಸಿದ್ದಾರೆ.
ಪಿ.ಆರ್. ಮೀನಾಕ್ಷಿ ಸುಂದರಮ್ ಹಾಗೂ ಸುಂದರ ಕಾಮರಾಜ್ ಅವರ  ನಿರ್ಮಾಣದ ಈ  ಚಿತ್ರಕ್ಕೆ  ಎಸ್.ನಾಗೇಂದ್ರ ಪ್ರಸಾದ್ ಆ್ಯಕ್ಷನ್ ಕಟ್  ಹೇಳಿದ್ದಾರೆ. ಜೀವಾ ಶಂಕರ್ ಅವರ ಛಾಯಾಗ್ರಹಣವಿದ್ದು, ಹಾಡುಗಳಿಗೆ  V2  ವಿಜಯ್ ಮತ್ತು ವಿಕ್ಕಿ ಅವರ ಸಂಗೀತ ಸಂಯೋಜನೆ ಇದೆ. ಧನಂಜಯ ರಂಜನ್ ಸಾಹಿತ್ಯ ರಚಿಸಿದ್ದಾರೆ. ಕಾರ್ತಿಕೇಯನ್ ಕ್ರಿಯೇಟಿವ್ ಪ್ರೊಡ್ಯೂಸರ್‌ ಆಗಿ ವರ್ಕ್ ಮಾಡಿದ್ದಾರೆ. 
 ಬಾಲಾಜಿ ಅವರ ಸಂಕಲನ, ಅಶ್ವಥ್ ಮಾರಿಮುತ್ತು ಅವರ ಕಥೆ, ಮಂಜು ಮಾಂಡವ್ಯ, ಸಂಪತ್ ಸಿರಿಮನೆ ಹಾಗೂ  ರಘುನಂದನ್ ಕಾನಡ್ಕ(ಪುನೀತ್ ಪಾತ್ರಕ್ಕೆ) ಅವರ ಸಂಭಾಷಣೆ, ಶೃಂಗೇರಿ ಸುರೇಶ್ ಅವರ ಸಹನಿರ್ದೇಶನವಿದೆ.‌  ಮೋಹನ್ ಬಿ ಕೆ. ಅವರ ಕಲಾನಿರ್ದೇಶನ  ಈ ಚಿತ್ರಕ್ಕಿದೆ. ಬರುವ ಡಿಸೆಂಬರ್  ಅಥವಾ  ಜನವರಿ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಚಿತ್ರ ತಂಡಕ್ಕಿದೆ
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed