ಪಿ.ವಾಸು - ಉಪೇಂದ್ರ ಸಂಗಮದಲ್ಲಿ ನೂತನ ಚಿತ್ರ
Posted date: 14/May/2011
      ‘ಆಪ್ತಮಿತ್ರ, ‘ಆಪ್ತರಕ್ಷಕದಂತಹ ಯಶಸ್ವಿ ಚಿತ್ರಗಳ ನಿರ್ದೇಶಕ ಪಿ.ವಾಸು ನಿರ್ದೇಶಿಸುತ್ತಿರುವ ನೂತನ ಚಿತ್ರದಲ್ಲಿ ಸೂಪರ್‌ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ವಿಭಿನ್ನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಚಿತ್ರೀಕರಣ ಇದೇ ತಿಂಗಳ ಹದಿನೆಂಟರಂದು ಮೈಸೂರಿನಲ್ಲಿ ಆರಂಭವಾಗಲಿದೆ.
     ಉದಯರವಿ ಫ಼ಿಲಂಸ್ ಲಾಂಛನದಡಿಯಲ್ಲಿ ಕೃಷ್ಣಪ್ರಜ್ವಲ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ಆಪ್ತರಕ್ಷಕ ಚಿತ್ರದ ನಂತರ ಇವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ. ಐದು ಹಾಡುಗಳು ಚಿತ್ರದಲ್ಲಿದೆ. ಈ ಪೈಕಿ ಎರಡು ಹಾಡುಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ ಎನ್ನುತ್ತಾರೆ ನಿರ್ಮಾಪಕರು. 
     ಮೈಸೂರು, ಕೇರಳ ಹಾಗೂ ವಿದೇಶದಲ್ಲಿ ಈ ಚಿತ್ರಕ್ಕೆ ಒಟ್ಟು ಎಂಭತ್ತೆರಡು ದಿನಗಳ ಚಿತ್ರೀಕರಣ ನಡೆಯಲಿದೆ. ಸದಾ, ಸೀತಾ, ಶಯಾಜಿ ಶಿಂಧೆ, ರಾಗಿಣಿ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.
     ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುರೇಶ್ ಅರಸ್ ಸಂಕಲನ, ವೇಣು ಕಲಾ ನಿರ್ದೇಶನ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮತ್ತು ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ ಈ ನೂತನ ಚಿತ್ರಕ್ಕಿದೆ.
 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed