ಕೆ.ಆರ್.ಜಿ ಸ್ಟುಡಿಯೋಸ್ ನ ಸಾಲುಸಾಲು ಚಿತ್ರಗಳಲ್ಲಿ ನಟಿಸಲಿದ್ದಾರೆ ಡಾಲಿ ಧನಂಜಯ್
Posted date: 08 Thu, Jul 2021 10:34:21 AM
ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಧನಂಜಯ್ ಒಂದು ದೀರ್ಘಕಾಲಿಕ ಒಪ್ಪಂದಕ್ಕೆ ಸಹಿ ಹಾಕಿದ್ದು, ಅವರಿಬ್ಬರೂ ಜೊತೆಗೂಡಿ ಇನ್ನೂ ಹಲವಾರು ಚಿತ್ರಗಳನ್ನು ಸಾಲು ಸಾಲಾಗಿ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿದೆ. 
ಒಟ್ಟಿನಲ್ಲಿ ಧನಂಜಯ್ ಅಭಿಮಾನಿಗಳಿಗೆ ಕೆ.ಆರ್.ಜಿ ಸ್ಟುಡಿಯೋ ಭರ್ಜರಿ ರಸದೌತಣ ನೀಡಲು ಸಿದ್ದವಾಗಿದೆ. 
ಸದ್ಯದಲ್ಲೇ ನೂತನ ಚಿತ್ರಗಳ ಶೀರ್ಷಿಕೆ ಹಾಗೂ ತಾಂತ್ರಿಕವರ್ಗದ ಮಾಹಿತಿ ಹೊರಬರುವ ನಿರೀಕ್ಷೆಯಿದೆ.
 ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಾಣ ‌ಮಾಡಿರುವ, ಡಾಲಿ ಧನಂಜಯ ನಾಯಕನಾಗಿ ಅಭಿನಯಿಸಿರುವ ``ರತ್ನನ ಪ್ರಪಂಚ`` ಚಿತ್ರ ಸಹ ಸದ್ಯದಲ್ಲೇ ತೆರೆಗೆ ಬರಲಿದೆ. 
 ರೋಹಿತ್ ಪದಕಿ ನಿರ್ದೇಶಿಸಿರುವ ಈ ಚಿತ್ರದ ಬಗ್ಗೆ ಗಾಂಧಿನಗರದಲ್ಲಿ ಉತ್ತಮ ಮಾತುಗಳು ಕೇಳಿ ಬರುತ್ತಿದೆ...
ಅಜನೀಶ್ ಲೋಕನಾಥ್ ``ರತ್ನನ‌ ಪ್ರಪಂಚ``ಕ್ಕೆ ಉತ್ತಮ ಹಾಡುಗಳನ್ನು ನೀಡಿದ್ದು, ಶ್ರೀಶ ಛಾಯಾಗ್ರಾಹಕರಾಗಿ‌ ಕಾರ್ಯ ನಿರ್ವಹಿಸಿದ್ದಾರೆ.
ಡಾಲಿಗೆ ನಾಯಕಿಯಾಗಿ ರೆಬಾ ಜಾನ್ ನಟಿಸಿದ್ದಾರೆ. ಉಮಾಶ್ರೀ, ಅನು ಪ್ರಭಾಕರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed