``ಲವ್ ಬರ್ಡ್ಸ್`` ಡಾರ್ಲಿಂಗ್ ಕೃಷ್ಣ ಮಿಲನ ನಾಗರಾಜ್ ಬಿಡುಗಡೆ ಮಾಡಿದರು ``ಗಿರ್ಕಿ`` ಚಿತ್ರದ ಲವ್ ಸಾಂಗ್
Posted date: 18 Sat, Jun 2022 08:39:03 AM
ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್  ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ``ಗಿರ್ಕಿ`` ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ವೀರೇಶ್ ಪಿ.ಎಂ ನಿರ್ದೇಶಿಸಿದ್ದಾರೆ‌.
ವೀರೇಶ್ ಅವರಿಗೆ ಇದು ಮೊದಲ ಚಿತ್ರ.

ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ``ಕದಿಯಲೇನು`` ಎಂಬ ಹಾಡನ್ನು ಕನ್ನಡ ಚಿತ್ರರಂಗದ ತಾರಾ ಜೋಡಿ, ``ಲವ್ ಬರ್ಡ್ಸ್``  ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. A2 music ಮೂಲಕ  ಹಾಡು ಬಿಡುಗಡೆಯಾಗಿದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವಿಲೋಕ್ ರಾಜ್ ಹಾಗೂ ದಿವ್ಯ ಉರುಡುಗಅಭಿನಯಿಸಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ.

ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ. ವೀರ್ ಸಮರ್ಥ್ ಅವರ ಸುಮಧುರ ಸಂಗೀತ ಕೇಳುಗರ ಮನಗೆದ್ದಿದೆ.

ಈ ಹಿಂದೆ ಯೋಗರಾಜ್ ಭಟ್ ಅವರು ಬರೆದಿರುವ ಎಣ್ಣೆ ಸಾಂಗ್ ಕೂಡ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಚಿತ್ರದ ಲವ್ ಸಾಂಗ್ ಬಿಡುಗಡೆಯಾಗಿದ್ದು, ಜುಲೈ 8 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. 
ವಾಸುಕಿ ಭುವನ್ ಅವರ ಸಹ ನಿರ್ಮಾಣವಿದೆ.  ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ.  ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ
ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

ಈ ಚಿತ್ರದ ಮೂಲಕ ವಿಲೋಕ್ ರಾಜ್ ನಾಯಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಹಾಗೂ ತುಣುಕನ್ನು ವೀಕ್ಷಿಸಿರುವ ಸಿನಿರಸಿಕರು ವಿಲೋಕ್ ರಾಜ್ ಅವರ ಅಭಿನಯವನ್ನು ಶ್ಲಾಘಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed