``ಬನಾರಸ್`` ನಲ್ಲಿ ಜಾನಪದ ಹಾಡು.
Posted date: 23 Sat, Jul 2022 08:47:17 AM
ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ,  ಜಯತೀರ್ಥ ನಿರ್ದೇಶಿಸಿರುವ ``ಬನಾರಸ್`` ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. 
``ಬನಾರಸ್`` ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ‌. 

``ಹೆಣ್ಣು ಹಡೆಯಲು ಬ್ಯಾಡಾ``ಎಂಬ ಪ್ರಸಿದ್ದ ಜಾನಪದ ಗೀತೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ‌.‌ ಅಜನೀಶ್ ಲೋಕನಾಥ್ ಅವರ ಸಮಧುರ ಸಂಗೀತದಲ್ಲಿ ಮೂಡಿಬಂದಿರುವ ಈ ಹಾಡನ್ನು ಹರ್ಷಿಕಾ ದೇವನಾಥ್ ಸುಶ್ರಾವ್ಯವಾಗಿ ಹಾಡಿದ್ದಾರೆ.

ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಪ್ಯಾನ್ ಇಂಡಿಯಾ ಸಿನಿಮಾವನ್ನು ತಿಲಕ್ ರಾಜ್ ಬಲ್ಲಾಳ್ ನಿರ್ಮಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed