``F0R REGN`` ಮಾತಿನ ಭಾಗದ ಚಿತ್ರೀಕರಣ ಪೂರ್ಣ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ
Posted date: 30 Thu, Jun 2022 08:53:10 AM
ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ  ``F0R REGN``. (ಫಾರ್ ರಿಜಿಸ್ಟರೇಷನ್) ಚಿತ್ರದ ಮಾತಿನ ಭಾಗದ ಚಿತ್ರೀಕರಣ  ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ‌. ಜುಲೈ ನಲ್ಲಿ ಆ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದೆ. ಈ ಎರಡು ಹಾಡುಗಳನ್ನು ಬಹದ್ದೂರ್ ಚೇತನ್ ಕುಮಾರ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ಕೇವಲ ಮೂವತ್ತೆರಡು ದಿನಗಳಲ್ಲಿ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.

``ದಿಯಾ`` ಹಾಗೂ ``ಲವ್ ಮಾಕ್ಟೇಲ್`` ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿಶ್ಚಲ್ ಫಿಲಂಸ್ ಮೂಲಕ  ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed