ವಿಜಯ್ ಸೇತುಪತಿ ಹುಟ್ಟುಹಬ್ಬಕ್ಕೆ ಪ್ಯಾನ್ ಇಂಡಿಯಾ ಸಿನಿಮಾ``ಮೈಕಲ್``ಚಿತ್ರದ ಪೋಸ್ಟರ್ ಬಿಡುಗಡೆ
Posted date: 16 Sun, Jan 2022 06:53:21 PM
ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಹುಟ್ಟುಹಬ್ಬಕ್ಕೆ ಪ್ಯಾನ್ ಇಂಡಿಯಾ ಸಿನಿಮಾ ``ಮೈಕಲ್`` ಚಿತ್ರದಿಂದ ಹೊಸ ಪೋಸ್ಟರ್ ಬಿಡುಗಡೆ.
ಸಂದೀಪ್ ಕಿಶನ್ ಮತ್ತು ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ``ಮೈಕಲ್``. 
 
ಜನವರಿ 16 ವಿಜಯ್ ಸೇತುಪತಿ ಅವರ ಹುಟ್ಟುಹಬ್ಬ. ಅದರ ಸವಿನೆನಪಿಗಾಗಿ  ``ಮೈಕಲ್`` ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ, ವಿಜಯ್ ಸೇತುಪತಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
 
ಶ್ರೀ ವೆಂಕಟೇಶ್ವರ ಸಿನಿಮಾಸ್ ಮತ್ತು ಕರಣ್ ಸಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ  ಈಗಾಗಲೇ ಹಲವು ಸಿನಿಮಾ ನಿರ್ಮಾಣ ಮಾಡಿರುವ ಶ್ರೀ ವೆಂಕಟೇಶ್ವರ ಸಿನಿಮಾಸ್ ಮೂಲಕ ಈ ಮಾಸ್ ಸಿನಿಮಾ ನಿರ್ಮಾಣವಾಗುತ್ತಿದೆ.
 
ರಂಜಿತ್ ಜೆಯಕೊಡಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ಮೂಡಿಬರಲಿದೆ
ನಾರಾಯಣ್ ದಾಸ್ ಕೆ ನಾರಂಗ್ ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ.  ಭರತ್ ಚೌಧರಿ, ಪುಷ್ಕರ್ ರಾಮ್ ಹಾಗೂ  ಮೋಹನ್ ರಾವ್ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed