ಬೆಳಕಿನ ಹಬ್ಬಕ್ಕೆ ಬಂತು``ಮಾಫಿಯಾ``ಚಿತ್ರದ ನೂತನ ಪೋಸ್ಟರ್
Posted date: 25 Tue, Oct 2022 12:12:47 PM
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದಾರೆ.
ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ.

ನಾಯಕ ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ "ಮಾಫಿಯಾ". ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ.

ಈಗಾಗಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾರ್ಗ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ‌.

"ಮಾಫಿಯಾ"ಗಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿತ್ತು.

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed