ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಭಾರೀ ಮೊತ್ತಕ್ಕೆ ಮಾರಾಟವಾಯಿತು ``F0R REGN``ಚಿತ್ರದ ಆಡಿಯೋ ಹಕ್ಕು
Posted date: 05 Wed, Oct 2022 10:05:11 PM
ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ - ನಾಯಕಿಯಾಗಿ ನಟಿಸಿರುವ  "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. 

 ಈ ಚಿತ್ರದಲ್ಲಿ ಆರು ಹಾಡುಗಳಿದ್ದು,   ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರಬಾಕಿಯಿದ್ದು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಮಾತಿನ ಜೋಡಣೆ ನಡೆಯುತ್ತಿದೆ.

ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. 

" ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರದ  ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.  ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿಶ್ಚಲ್ ಫಿಲಂಸ್ ಮೂಲಕ 
 ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed