ವಿಭಿನ್ನ ಕಥಾಹಂದರದ ``ಲೈನ್ ಮ್ಯಾನ್`` ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ‌.
Posted date: 10 Wed, Aug 2022 12:24:44 PM
``ಭಿನ್ನ`` ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ ``ಡಿಯರ್ ಸತ್ಯ`` ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ  "ಲೈನ್ ಮ್ಯಾನ್" ಚಿತ್ರ ಆರಂಭವಾಗಿದೆ.
ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಶ್ರೀ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.

 ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರಘು ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ  
``ರನ್ ಆಂಟೊನಿ``  ಹಾಗೂ "ಟಕ್ಕರ್"   ಚಿತ್ರಗಳನ್ನು ರಘು ಶಾಸ್ತ್ರಿ ನಿರ್ದೇಶಿಸಿದ್ದರು.

ತ್ರಿಗುಣ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.  ಆರ್.ಜಿ.ವಿ ನಿರ್ದೇಶನದ ``ಕೊಂಡ`` ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ.
ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್,  ಹರಿಣಿ ಹಾಗೂ ``ತರ್ಲೆನನ್ಮಗ`` ಖ್ಯಾತಿಯ ಅಂಜಲಿ‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಹಳ್ಳಿ ಕಡೆ ದಿನ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ನಿಂದಾಗುವ ತೊಂದರೆ ಸರಿಪಡಿಸುವ ``ಲೈನ್ ಮ್ಯಾನ್``ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ ``ಲೈನ್ ಮ್ಯಾನ್`` ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ
ಪ್ರಚುರ ಪಿ ಪಿ , ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed