ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಚಟುವಟಿಕೆಗಳ ಬಗ್ಗೆ ವಿವರಿಸಲಾಯಿತು. ರಿಜಿಸ್ಟ್ರಾರ್ ಹಿಮಂತರಾಜು ಜಿ. ಉಪಸ್ಥಿತರಿದ್ದರು.