ಆಗಸ್ಟ್‌ನಲ್ಲಿ ಬರುತ್ತಿದ್ದಾರೆ ``ರಾಕ್ಷಸರು``
Posted date: 14 Thu, Jul 2022 09:06:28 AM
ಕನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ನಿರ್ಮಿಸಿರುವ ``ರಾಕ್ಷಸರು`` ಚಿತ್ರ ಆಗಸ್ಟ್ ನಲ್ಲಿ ದೇಶದಾದ್ಯಂತ ತೆರೆ ಕಾಣುತ್ತಿದೆ. 

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. 

ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು  ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ "ರಾಕ್ಷಸರು". ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. 

ಚಿತ್ರ ಸಿದ್ದವಾಗಿ ಬಹಳ ದಿನಗಳಾಗಿದೆ. ಆದರೆ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿ, ಕ್ರೈಂ ಹೆಚ್ಚಾಗಿರುವುದರಿಂದ ಬಿಡುಗಡೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು. 
ಆ ನಂತರ ನಿರ್ಮಾಪಕರ ಮನವಿ ಮೇರೆಗೆ ಕೆಲವು ಕಟ್ ಗಳ ಜೊತೆಗೆ A ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ.   

A ಸರ್ಟಿಫಿಕೇಟ್ ನೊಂದಿಗೆ 
ಆಗಸ್ಟ್‌ ಎರಡನೇ ವಾರ ಚಿತ್ರ ಭಾರತದಾದ್ಯಂತ ತೆರೆ ಕಾಣುತ್ತಿದೆ ಎಂದು ತಿಳಿಸಿರುವ ನಿರ್ಮಾಪಕರು, ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿದ್ದಾರೆ.

ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ  ಚಿತ್ರಕ್ಕಿದೆ.

ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ತ್ರಿವೇಣಿ, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed