ರಾಗಿಣಿ ದ್ವಿವೇದಿ - ಆರ್ ಕೆ ಚಂದನ್ ಅಭಿನಯದ ಈ ಚಿತ್ರಕ್ಕೆ ಶಂಕರ್ ಕೋನಮಾನಹಳ್ಳಿ ನಿರ್ದೇಶನ
ಈ ಹಿಂದೆ "ಶಂಭೋ ಶಿವ ಶಂಕರ" ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ದ್ವಿತೀಯ ಚಿತ್ರ "ಬಿಂಗೋ".
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್ ಕೆ ಚಂದನ್ ನಟಿಸುತ್ತಿದ್ದಾರೆ. ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿಸಿರುವ " ಬಿಂಗೋ" ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿರುವ ದೇವರಾಜ್ ಎಸ್ಟೇಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ (ನಾಯಕ) , ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಹಿತನ್ ಹಾಸನ್ ಸಂಗೀತ ನಿರ್ದೇಶನವಿರುವ "ಬಿಂಗೋ" ಚಿತ್ರಕ್ಕೆ ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿದೆ.