ಏಪ್ರಿಲ್ 30 ರಂದು ಬರ್ಕ್ಲಿ ಚಿತ್ರದ ಅದ್ದೂರಿ ಟೀಸರ್ ಬಿಡುಗಡೆ.
Posted date: 29 Thu, Apr 2021 06:57:12 PM
``ಬರ್ಕ್ಲಿ`` ಚಿತ್ರದ ಅದ್ದೂರಿ ಟೀಸರ್ ಏಪ್ರಿಲ್ 30 ರ ಸಂಜೆ 5 ಗಂಟೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗುತ್ತಿದೆ.
 ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ‌ ಸಿದ್ದವಾಗಲಿದೆ.  ಕರಿಯ, ಗಣಪ, ಕರಿಯ 2  ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ ``ಬರ್ಕ್ಲಿ‌``. 
ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
``ಬರ್ಕ್ಲಿ``ಎಂದ ಕೂಡಲೇ ಎಲ್ಲರೂ ಸಿಗರೇಟ್ ಒಂದರ ಹೆಸರು ಎಂದುಕೊಳ್ಳುತ್ತಾರೆ. ಆದರೆ ನಮ್ಮ ``ಬರ್ಕ್ಲಿ``  ಚಿತ್ರಕ್ಕೂ ಸಿಗರೇಟ್ ಗೂ ಯಾವುದೇ ಸಂಬಂಧವಿಲ್ಲ. ನಮ್ಮ ಚಿತ್ರದ ಶೀರ್ಷಿಕೆಯ ಅರ್ಥವೇ ಬೇರೆ ಎನ್ನುತ್ತಾರೆ ನಿರ್ದೇಶಕ ಸುಮಂತ್ ಕ್ರಾಂತಿ.
 
ಗಣಪ, ಕರಿಯ 2 ಚಿತ್ರಗಳಲ್ಲಿ ನಟಿಸಿ ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ.
ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.
 
ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ‌ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ.  ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣ, ಅಮಿತ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.


 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed