ಯುವರಾಜ ಈಗ `ಯುದುವೀರ`
Posted date: 23 Sun, Jan 2022 02:03:41 PM
ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ ಸಿನಿಮಾ ರೆಡಿಯಾಗ್ತಿದೆ. ಈ ಸಿನಿಮಾಗೆ ಯದುವೀರ ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ಕೂಡ ಅನಾವರಣ ಮಾಡಲಾಗಿದೆ.

ಯದುವೀರ ಸಿನಿಮಾಗೆ ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಮಂಜು ಚಿತ್ರರಂಗದಲ್ಲಿ ಇದ್ದಾರೆ. ಯಶ್​ ನಟನೆಯ `ಮಾಸ್ಟರ್‌ ಪೀಸ್‌`, ಶಿವರಾಜ್​ಕುಮಾರ್​ ಅಭಿನಯದ `ಮಫ್ತಿ`ಸಿನಿಮಾಗಳಿಗೆ ಅಸೋಸಿಯೇಟ್‌ ಡೈರೆಕ್ಟರ್​ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ `ಪ್ರೇಮಂ ಪೂಜ್ಯಂ` ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಅವರ ಸಿನಿಮಾದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬ ಈ ಚಿತ್ರದ ಟೈಟಲ್ ಇಂದು ಘೋಷಣೆ ಆಗಿದೆ. ಜತೆಗೆ ಫಸ್ಟ್ ಪೋಸ್ಟರ್ ಕೂಡ ರಿಲೀಸ್​ ಆಗಿದೆ. ಈ ಮೂಲಕ ನಿಖಿಲ್​ ಬರ್ತ್​ಡೇಗೆ ಅಭಿಮಾನಿಗಳಿಗೆ ಚಿತ್ರತಂಡದಿಂದ ಗಿಫ್ಟ್​ ಸಿಕ್ಕಿದೆ.


ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಯದುವೀರ್ ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ  ನಿಶಾ ವೆಂಕಟ್ ಕೊನಂಕಿ  ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದು, `ಮಫ್ತಿ`, `ಮದಗಜ`ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಸದ್ಯದಲ್ಲಿಯೇ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed