ನೈಂಟಿಗೆ ಅಧ್ಯಕ್ಷರ ಸಾಥ್...
Posted date: 13 Sat, Aug 2022 08:16:53 AM
ಹೌದು.! ಹಾಸ್ಯ ನಟ ವೈಜನಾಥ ಬಿರಾದಾರ್ ಅಭಿನಯದ ``ಐನೂರ``ನೇ ಚಿತ್ರ ಎಂದು ಸದ್ದಾಗಿದ್ದ ``ಅಮ್ಮಾ ಟಾಕೀಸ್ ಬಾಗಲಕೋಟೆ`` ಸಂಸ್ಥೆಯ ನಿರ್ಮಾಣದ ``ನೈಂಟಿ ಬಿಡಿ ಮನೀಗ್ ನಡಿ``ಚಿತ್ರ ರಿಲೀಸಿಗೆ ತಯಾರಾಗುತ್ತಿದ್ದು,  ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಗೊಳಿಸಿದೆ. . ``A2``ಮ್ಯೂಸಿಕ್ ಚಾನೆಲ್ಲಿಗೆ ಭರ್ಜರಿ ಡಿಮಾಂಡಿನೊಂದಿಗೆ ಆಡಿಯೋ ಮಾರಿಕೊಂಡ ತಂಡ ಆ ಆಡಿಯೋ ಕಂಪೆನಿಯ ಯೂಟ್ಯೂಬ್(A2 Music ) ವಾಹಿನಿಯ ಮೂಲಕ ಟೀಸರ್ ಬಿಟ್ಟುಕೊಂಡಿದೆ. ವಿಶೇಷವಾಗಿ  ಹೆಸರಾಂತ ನಾಯಕನಟ ``ಶರಣ್``ಅವರು ಈ ಚಿತ್ರದ ಟೀಸರ್ ಮೆಚ್ಚಿಕೊಂಡು ಬಿಡುಗಡೆಗೆ ಸಾಥ್ ನೀಡಿದ್ದಾರೆ. ಬಿರಾದಾರ್ ರವರು ಶರಣ್ ರವರ ತಂದೆಯ ಒಡನಾಡಿಯಾಗಿದ್ದು ಅದೇ ಅಭಿಮಾನದೊಂದಿಗೆ `` ನೈಂಟಿಗೆ``ಜೊತೆಯಾಗಿದ್ದಾರೆ. ``ನಾವು ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಅಭಿನಯಿಸಿದವರು, ಮಿಗಿಲಾಗಿ ಇವರೊಬ್ಬ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತರು, ಇಂಥವರ ನಟನೆಯ ಐನೂರನೇ ಸಿನಿಮಾ  ಎಂಬುದೇ ನಮ್ಮೆಲ್ಲರ ಹೆಮ್ಮೆ`` ಎನ್ನುತ್ತಲೇ ಟೀಸರ್ ಬಿಡುಗಡೆಗೊಳಿಸಿದ ಶರಣ್ ಚಿತ್ರದ ಯಶಸ್ಸಿಗೆ ಶುಭ ಹಾರೈಸಿದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed