ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ``ಮಾಫಿಯಾ``ಚಿತ್ರದ ಮಾಸ್ ಪೋಸ್ಟರ್
Posted date: 03 Sun, Jul 2022 12:26:38 PM
ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ ಅವರು ನಾಯಕರಾಗಿ ನಟಿಸುತ್ತಿರುವ ``ಮಾಫಿಯಾ``ಚಿತ್ರತಂಡ ಹೊಸ ಮಾಸ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ಪ್ರಜ್ವಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ.

ಕ್ರೈಂ ಥ್ರಿಲ್ಲರ್ ಕಥಾಹಂದರ  ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸುತ್ತಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶೈನ್ ಶೆಟ್ಟಿ, ದೇವರಾಜ್, ವಿಜಯ್ ಚೆಂಡೂರ್, ವಾಸುಕಿ ವೈಭವ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed